ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಸೇರಿದಂತೆ ನಾಲ್ವರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ್ದು ಸದ್ಯ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಜೈಲಿನಲ್ಲಿರುವ ದರ್ಶನ್ ಸಂಪೂರ್ಣವಾಗಿ ಮಂಕಾಗಿದ್ದು ಯಾರೊಂದಿಗೂ ಮಾತನಾಡಿದೆ ಮೌನಕ್ಕೆ ಜಾರಿದ್ದಾರೆ. ಜೈಲಿನಲ್ಲಿರುವ ದಾಸನಿಗೆ ಇದೀಗ ಮತ್ತೊಂದು ಟೆನ್ಶನ್ ಶುರುವಾಗಿದೆ.
ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಗೆ ಅಲ್ಲಿ ನೀಡಿದ ರಾಜಾಥಿಥ್ಯದಿಂದ ಬಳ್ಳಾರಿ ಜೈಲಿಗೆ ಸ್ಥಾಳಾಂತರ ಮಾಡಲಾಗಿತ್ತು. ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬಂದಿದ್ದ ದರ್ಶನ್ ಅವರನ್ನು ಇದೀಗ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಇದೀಗ ಮತ್ತೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವ ಯೋಚನೆ ಇದ್ದು ಇದು ದರ್ಶನ್ ಗೆ ಮತ್ತಷ್ಟು ಟೆನ್ಶನ್ ಉಂಟುಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ನ್ಯಾಯಾಂಗ ಬಂಧನ ಒದಗಿಸಿದ್ದರಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಯಿತು. ಆದರೆ, ಅಲ್ಲಿ ಅವರು ಐಷಾರಾಮಿ ಸವಲತ್ತು ಪಡೆದಿದ್ದು ಜೊತೆಗೆ ರೌಡಿಶೀಟರ್ಗಳ ಜೊತೆ ದರ್ಶನ್ ಸಿಗರೇಟ್ ಸೇದುತ್ತಾ ಕುಳಿತ ಫೋಟೋ ವೈರಲ್ ಆಯಿತು. ಅಲ್ಲದೆ, ಸಹ ಕೈದಿಗೆ ವಿಡಿಯೋ ಕಾಲ್ ಮಾಡುವಾಗ ಕೂಡ ದರ್ಶನ್ ಕಾಣಿಸಿಕೊಂಡಿದ್ದರು. ಈ ಎಲ್ಲಾ ಕಾರಣಗಳಿಂದ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಮತ್ತೆ ಜೈಲಿಗೆ ಬಂದಿದ್ದು ಮತ್ತೆ ಬಳ್ಳಾರಿ ಜೈಲಿಗೆ ಕಳುಹಿಸುವ ಕುರಿತು ಮಾತುಕತೆ ನಡೆಯುತ್ತಿದೆ ಎನ್ನಲಾಗುತ್ತಿದೆ.