ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭ; ಸಚಿವ ಮುನಿಯಪ್ಪ

0
Spread the love

ಬೆಂಗಳೂರು:- ಶೀಘ್ರವೇ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭ ಮಾಡೋದಾಗಿ ಆಹಾರ ಸಚಿವ ಮುನಿಯಪ್ಪ ವಿಧಾನ ಪರಿಷತ್‌ನಲ್ಲಿ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ಮಾತಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ 74% ಬಿಪಿಎಲ್ ಕಾರ್ಡ್ ಇವೆ. ಬೇರೆ ಯಾವುದೇ ದಕ್ಷಿಣ ರಾಜ್ಯದಲ್ಲಿ ಇಷ್ಟು ಬಿಪಿಎಲ್ ಕಾರ್ಡ್ ಇಲ್ಲ. ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ಜಾಸ್ತಿ ಇವೆ.

Advertisement

ಈಗ 1.28 ಕೋಟಿ ಕಾರ್ಡ್‌ಗೆ ಅಕ್ಕಿ ಕೊಡಲಾಗುತ್ತಿದೆ. 3.27 ಲಕ್ಷ ಕಾರ್ಡ್ ಬಿಪಿಎಲ್ ಕಾರ್ಡ್ ಕೊಡೋಕೆ ಬಾಕಿ ಇದೆ. ಎಪಿಎಲ್ ಅರ್ಹತೆ ಇರೋರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಅಧಿವೇಶನ ಮುಗಿದ ಬಳಿಕ ಅದನ್ನ ಪರಿಷ್ಕರಣೆ ಶುರು ಮಾಡುತ್ತೇವೆ.

ಅಧಿವೇಶನ ಮುಗಿದ ಮೇಲೆ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಶುರು. ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ ಅರ್ಜಿ ಹಾಕಿರೋ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ ಎಂದು ಹೇಳಿದರು.  ಎಪಿಎಲ್ ಕಾರ್ಡ್ ರಾಜ್ಯದಲ್ಲಿ 25 ಕಾರ್ಡ್ ಇವೆ. ಆದರೆ 1 ಲಕ್ಷ ಜನರು ಮಾತ್ರ ಅಕ್ಕಿ ಪಡೆಯುತ್ತಿದ್ದಾರೆ. ಅದಕ್ಕೆ ಎಪಿಎಲ್ ಕಾರ್ಡ್ ಕೊಡೋದು ನಿಲ್ಲಿಸಿದ್ದೇವೆ. ಅಗತ್ಯ ಇದ್ದರೆ ಎಪಿಎಲ್ ಕಾರ್ಡ್ ಕೊಡ್ತೀವಿ ಅಂತ ತಿಳಿಸಿದರು.


Spread the love

LEAVE A REPLY

Please enter your comment!
Please enter your name here