ವಿಲ್ಸನ್ ಗಾರ್ಡನ್‌ನಲ್ಲಿ ನಿಗೂಢ ಬ್ಲಾಸ್ಟ್ ಪ್ರಕರಣ: ಗಾಯಗೊಂಡಿದ್ದ ತಾಯಿ, ಮಗಳು ದುರ್ಮರಣ!

0
Spread the love

ಬೆಂಗಳೂರು:- ಕಳೆದ ಆ.15ರಂದು ವಿಲ್ಸನ್ ಗಾರ್ಡನ್ ಬಳಿಯ ಆಡುಗೋಡಿಯಲ್ಲಿ ಸಂಭವಿಸಿದ್ದ ನಿಗೂಢ ಬ್ಲಾಸ್ಟ್ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ತಾಯಿ ಹಾಗೂ ಮಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Advertisement

8 ವರ್ಷದ ಮಗಳು ಖಯಾಲಾ, 45 ವರ್ಷದ ತಾಯಿ ಕಸ್ತೂರಮ್ಮ ಮೃತರು. ಎಸ್, ಘಟನೆಯಲ್ಲಿ ಬಾಲಕ ಮುಬಾರಕ್ ಸಾವನ್ನಪ್ಪಿದ್ದು, 8 ಜನರು ಗಾಯಗೊಂಡಿದ್ದರು. ಈ ಪೈಕಿ ಮುಖ ಹಾಗೂ ಎದೆ ಭಾಗದಲ್ಲಿ ಸುಟ್ಟು ಗಾಯಗೊಂಡಿದ್ದ ಮಗಳು ಹಾಗೂ ತಾಯಿ ಇಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿತ್ತು. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು. ಗಾಯಾಳುಗಳು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಾಗಿದ್ದರು.

ಸಿಲಿಂಡರ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಆಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here