ವಿಜಯಸಾಕ್ಷಿ ಸುದ್ದಿ, ಗದಗ
Advertisement
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗದಗ ಜಿಲ್ಲೆಯ ಶಾಲಾ -ಕಾಲೇಜುಗಳಿಗೆ ಮಂಗಳವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಅತಿಯಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮಂಗಳವಾರದಂದು (19-08-2025) ಒಂದು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಆದೇಶ ಹೊರಡಿಸಿದ್ದಾರೆ.