ಕರವೇ ಮಹಿಳಾ ಅಧ್ಯಕ್ಷರಾಗಿ ಲಕ್ಷ್ಮೀ ಹಿತ್ತಲಮನಿ ನೇಮಕ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದ ವತಿಯಿಂದ ವೇದಿಕೆಯ ಮಹಿಳಾ ಘಟಕದ ಗದಗ ಜಿಲ್ಲಾಧ್ಯಕ್ಷರನ್ನಾಗಿ ಲಕ್ಷ್ಮೀ ವಿ.ಹಿತ್ತಿಲಮನಿ ಇವರನ್ನು ಆಯ್ಕೆ ಮಾಡಲಾಗಿದೆ.

Advertisement

ಈ ಹಿಂದೆ ಗದಗ ತಾಲೂಕಾಧ್ಯಕ್ಷರಾಗಿ, ಗದಗ ಜಿಲ್ಲಾ ಉಪಾಧ್ಯಕ್ಷರಾಗಿ ಗದಗ ಜಿಲ್ಲೆಯಲ್ಲಿ ಮಹಿಳಾ ಘಟಕವನ್ನು ಉತ್ತಮವಾಗಿ ಕಟ್ಟಿದ್ದು, ನಾಡು, ನುಡಿ, ನೆಲ, ಜಲಕ್ಕೆ ಧಕ್ಕೆ ಬಂದಾಗ ಮಹಿಳೆರೊಂದಿಗೆ ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಅವರ ಕ್ರಿಯಾಶೀಲತೆಯನ್ನು ಗಮನಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಆದೇಶದ ಮೇರೆಗೆ ಲಕ್ಷ್ಮೀ ವಿ. ಹಿತ್ತಲಮನಿಯವರನ್ನು ಗದಗ ಜಿಲ್ಲಾಧ್ಯಕ್ಷರಾದ ಹನಮಂತಪ್ಪ ಎಚ್.ಅಬ್ಬಿಗೇರಿ ಆಯ್ಕೆ ಮಾಡಿ ಆದೇಶ ಪತ್ರ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯದ ಸಮಿತಿ ಸದಸ್ಯರು, ರಾಜ್ಯ ಪದಾಧಿಕಾರಿಗಳು ಹಾಗೂ ಗದಗ ಜಿಲ್ಲಾ ಪದಾಧಿಕಾರಿಗಳು, ತಾಲೂಕಾ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here