ಚಿತ್ರದುರ್ಗ:- ನಗರದ ಹೊರಭಾಗದ ಗೋನೂರು ಬ್ರಿಡ್ಜ್ ಬಳಿ ಸುಟ್ಟ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿರುವ ಘಟನೆ ಜರುಗಿದೆ.
25 ವರ್ಷ ವಯಸ್ಸಿನ ಮಹಿಳೆಯನ್ನು ಪೆಟ್ರೋಲ್ ಹಾಕಿ ಕೊಲೆ ಮಾಡಿ ಶವ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವತಿ ಶವದ ಗುರುತು ಇದುವರೆಗೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಅಲ್ಲದೇ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರೂ ಮತ್ತು ಡಿವೈಎಸ್ಪಿ ದಿನಕರ್ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



