ನವದೆಹಲಿ:- ಅರ್ಜಿದಾರರ ಸೋಗಿನಲ್ಲಿ ಬಂದು ಅಪರಿಚಿತನೋರ್ವ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಹಲ್ಲೆ ಬಗ್ಗೆ ಮುಖ್ಯಮಂತ್ರಿ ರೇಖಾ ಗುಪ್ತ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇದು ನನ್ನ ಮೇಲೆ ಮಾತ್ರವಲ್ಲ, ದೆಹಲಿ ಮತ್ತು ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಮಾಡಿದ ಹೇಡಿತನದ ಪ್ರಯತ್ನ ಎಂದು ಆರೋಪಿಸಿದ್ದಾರೆ. ನಾನು ಆರೋಗ್ಯವಾಗಿದ್ದೇನೆ. ಶೀಘ್ರದಲ್ಲೇ ಕೆಲಸಕ್ಕೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನೂ ಗುಜರಾತ್‌ನ ರಾಜ್‌ಕೋಟ್‌ನ ಸಕಾರಿಯಾ ರಾಜೇಶ್‌ಭಾಯ್ ಖಿಮ್ಜಿಭಾಯ್ ಎಂಬಾತ ಸಿಎಂಗೆ ಕಪಾಳಮೋಕ್ಷ ಮಾಡಿದ್ದ. ಅರ್ಜಿದಾರರ ಸೋಗಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗುವಾಗ, ಅವರ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ.