ವಿಜಯಸಾಕ್ಷಿ ಸುದ್ದಿ, ಗದಗ: ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸರ್ವೇಜನಾಃ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಭಾಗಿತ್ವದಲ್ಲಿ 8ನೇ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಗಸ್ಟ್ 31ರಂದು ನಡೆಯಲಿದೆ.
ಸಮಾರಂಭದಲ್ಲಿ ಗದುಗಿನ ಕಲಾವಿದೆ ಡಾ. ಪದ್ಮಾ ಜೆ.ಕಬಾಡಿ ಅವರ ಸಾಹಿತ್ಯ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ಗೌರವಪೂರ್ವಕವಾಗಿ `ಭಾರತ ಭೂಷಣ’ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಸಂಸ್ಥಾಪಕರು, ರಾಜ್ಯಾಧ್ಯಕ್ಷರು, ಚಲನಚಿತ್ರ-ಕಿರುತರೆ ನಟಿ ಲಕ್ಷಿತಾ ಗಂಗಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



