ಬೆಂಗಳೂರು: ಧರ್ಮದ ಉಳಿವಿಗಾಗಿ ನಾಳೆಯಿಂದಲೇ ಹೋರಾಟ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಧರ್ಮಸ್ಥಳದ ವಿರುದ್ಧ ಅಪಪ್ರಚಾರವಾಗುತ್ತಿದ್ದು, ನಾಳೆಯಿಂದಲೇ ಹೋರಾಟ ಆರಂಭವಾಗಲಿದೆ.
Advertisement
ಮೂರು ಹಂತಗಳಲ್ಲಿ ಹೋರಾಟ ನಡೆಯಲಿದೆ ಎಂದರು. ಇನ್ನೂ ಮಹೇಶ್ ಶೆಟ್ಟಿ ತಿಮ್ಮರೋಡಿ ವಶಕ್ಕೆ ಪಡೆದ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರ ಕಾನೂನಾತ್ಮಕ ಕ್ರಮ ತೆಗೆದುಕೊಂಡಿದೆ. ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದರು.
ಇನ್ನೂ ಕಳೆದ ಒಂದು ತಿಂಗಳಿಂದ ಧರ್ಮಸ್ಥಳ ವಿಚಾರದಲ್ಲಿ ಏನೆಲ್ಲಾ ಬೆಳವಣಿಗೆ ಆಗಿದೆ ಗೊತ್ತಿದೆ. ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಧರ್ಮಸ್ಥಳ ವಿಚಾರದಲ್ಲಿ SIT ತನಿಖೆಗೆ ನೇಮಿಸಿದಾಗ ಪಾರದರ್ಶಕವಾಗಿ ತನಿಖೆ ನಡೆಯಲಿ ಅಂತಾ ಬಿಜೆಪಿ ಸ್ವಾಗತ ಮಾಡಿತ್ತು. ಇಂದೂ ಕೂಡ ಹಿಂದೆ ಸರಿದಿಲ್ಲ. ನಿರಂತರ ಅಪಪ್ರಚಾರ ನಡೆಯುತ್ತಿದೆ ಎಂದರು.