ಬೆಂಗಳೂರು:- ಪ್ರಿಯಕರನಿಂದಲೇ ವರ್ಷಿತಾ ಕೊಲೆ ಪ್ರಕರಣ ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿತು. ದಲಿತ ಮಾದಿಗ ಸಮುದಾಯದ ವಿದ್ಯಾರ್ಥಿನಿ ವರ್ಷಿತಾ. ಅವಳನ್ನು ಬರ್ಬರವಾಗಿ ಹತ್ಯೆ ಮಾಡಿ ಸುಟ್ಟು ಹಾಕಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
Advertisement
ಅತ್ಯಂತ ಬಡತನದ ಕುಟುಂಬದಿಂದ ಬಂದು ಭವಿಷ್ಯದ ಕನಸು ಕಾಣುತ್ತಿದ್ದ ವಿದ್ಯಾರ್ಥಿನಿ. ಸರ್ಕಾರಿ ಹಾಸ್ಟೆಲ್ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ. ರಾಜ್ಯದಲ್ಲಿ ಈ ರೀತಿ ಘಟನೆಗಳು ನಡೆದ ಸಂದರ್ಭದಲ್ಲಿ ಸರ್ಕಾರ ನ್ಯಾಯ ಕೊಡಿಸಬೇಕು. ಈ ಹತ್ಯೆಗೆ ಕಾರಣವಾಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತ ಆಗ್ರಹ ಮಾಡಿದರು
ಇದಕ್ಕೆ ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಿ, ಸರ್ಕಾರ ಇಂತಹ ಘಟನೆ ಸಹಿಸುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಕಠಿಣ ಕ್ರಮ ಮುಲಾಜಿಲ್ಲದೇ ತೆಗೆದುಕೊಳ್ಳುತ್ತೇವೆ. ಯಾರೇ ಇದ್ದರು ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.