ಚಿತ್ರಕಲಾ ಸ್ಪರ್ಧೆಯಲ್ಲಿ ಚೈತ್ರಾ ಅಳೆಹೊನ್ನಪ್ಪನವರ ತೃತೀಯ ಸ್ಥಾನ

0
Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಹೂವಿನ ಹಡಗಲಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪಟ್ಟಣದ ಶ್ರೀ ಜಗದ್ಗುರು ಪಂಚಾಚಾರ್ಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಶ್ರೀ ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಚೈತ್ರಾ ಅಳೆಹೊನ್ನಪ್ಪನವರ ತೃತೀಯ ಸ್ಥಾನ ಪಡೆದು ಪಟ್ಟಣಕ್ಕೆ ಕೀರ್ತಿ ತಂದಿದ್ದಾಳೆ ಎಂದು ಮುಖ್ಯ ಶಿಕ್ಷಕಿ ನಿರ್ಮಲಾ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಹೂವಿನ ಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಸಾಹಿತ್ಯ, ಸಂಸ್ಕೃತಿ, ಸಾಹಿತಿಗಳ ವೇದಿಕೆಯು ಸ್ವಾತಂತ್ತ್ಯ ದಿನೋತ್ಸವದ ನೆನೆಪಿಗಾಗಿ ಆ. 17ರಂದು ವಿವಿಧ ಚಟುವಟಿಕೆ, ಚಿತ್ರಕಲೆ, ಸಾಹಿತ್ಯ, ಸಾಂಸ್ಕೃತಿಕ ಕಲೆಗಳ ಸ್ಪರ್ಧೆ ಏರ್ಪಡಿಸಿದ್ದರು. ಈ ಸಂಘಟನೆಯ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 7ನೇ ತರಗತಿಯ ಚೈತ್ರಾ ಅಳೆಹೊನ್ನಪ್ಪನವರ ತೃತೀಯ ಸ್ಥಾನ ಪಡೆದಿದ್ದಾಳೆ.

ಸಂಸ್ಥೆಯ ಅಧ್ಯಕ್ಷರಾದ ಷ. ಬ್ರ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು, ಕಾರ್ಯದರ್ಶಿ, ಸರ್ವ ಸದಸ್ಯರು, ಶಿಕ್ಷಕ ವೃಂದ ವಿದ್ಯಾರ್ಥಿನಿಯ ಸಾಧನೆಗೆ ಶುಭ ಹಾರೈಸಿದ್ದಾರೆ.


Spread the love

LEAVE A REPLY

Please enter your comment!
Please enter your name here