ನಾನು ಹೇಳಿದ್ದೆಲ್ಲಾ ಸುಳ್ಳು, ನನಗೆ ಅನನ್ಯಾ ಭಟ್‌ ಅನ್ನೋ ಮಗಳೇ ಇರಲಿಲ್ಲ – ಸುಜಾತ ಭಟ್ ಸ್ಪೋಟಕ ಹೇಳಿಕೆ!

0
Spread the love

ಮಂಗಳೂರು:– ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ.

Advertisement

ಇತ್ತ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಕೇಸ್​ನಲ್ಲಿ ಕೂಡ ಒಂದೊಂದೆ ಸತ್ಯಗಳು ಹೊರಬರುತ್ತಿವೆ. ಇತ್ತೀಚೆಗೆ ಸುಜಾತಾ ಭಟ್ ತಮ್ಮ ಮಗಳೆಂದು ಅನನ್ಯಾ ಭಟ್​ ಫೋಟೋವೊಂದನ್ನು​ ತೋರಿಸಿದ್ದರು. ಇದೀಗ ಈ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.

ಧರ್ಮಸ್ಥಳದಲ್ಲಿ ಅನಾಮಿಕನ ದೂರು ಹಾಗೂ ಸುಜಾತ ಭಟ್ ದೂರು ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಏಕಾಏಕಿ ಸುಜಾತ ಭಟ್ ಉಲ್ಟಾ ಹೊಡೆದಿದ್ದಾಳೆ. ‘ನಾನು ಸುಳ್ಳು ಹೇಳಿದ್ದೇನೆ’, ನನಗೆ ಹೀಗೆ ಸುಳ್ಳು ಹೇಳು ಎಂದು ಕೆಲವರು ಹೇಳಿ ಕೊಟ್ಟರು ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾಳೆ.

ಸಂದರ್ಶನದಲ್ಲಿ ಅನನ್ಯಾ ಭಟ್​ ಅಂತ ನನಗೆ ಮಗಳೇ ಇರಲಿಲ್ಲ. ಇಷ್ಟು ದಿನ ನಾನು ಸುಳ್ಳು ಹೇಳಿದ್ದೇನೆ. ಕೆಲವರು ನನಗೆ ಹೀಗೆ ಸುಳ್ಳು ಹೇಳು ಅಂತ ಹೇಳಿದ್ದರು ಅದಕ್ಕೆ ನಾನು ಹೇಳಿದ್ದೇನೆ. ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಇನ್ನಿತರರು ಹೇಳಿದ್ದರು. ಆಸ್ತಿ ಸಮಸ್ಯೆಯಿಂದ ಹೀಗೆ ಹೇಳು ಅಂತ ಅವರೆಲ್ಲಾ ಹೇಳಿದ್ದರು. ಅದಕ್ಕೆ ನಾನು ಹೇಳಿಬಿಟ್ಟೆ ಎಂದು ಒಪ್ಪಿಕೊಂಡಿದ್ದಾಳೆ.

ನಾನು ದುಡ್ಡಿಗೊಸ್ಕರ ಡಿಮ್ಯಾಂಡ್ ಮಾಡಿಲ್ಲ. ನಾನು ಯಾರು ಕೂಡ ದುಡ್ಡು ಕೊಡ್ತೀನಿ ಅಂತ ಹೇಳಲಿಲ್ಲ. ನಮ್ಮ ಆಸ್ತಿ ಜೈನರಿಗೆ ಕೊಟ್ಟಿದ್ದರು. ಆದ್ರೆ, ನನ್ನ ಸಹಿ ಇಲ್ಲದೇ ಆಸ್ತಿಯನ್ನು ಹೇಗೆ ಕೊಟ್ರಿ ಅಂತ ಕೇಳಿದೆ. ನನ್ನ ತಾತನ ಆಸ್ತಿ ಅದು ಮೊಮ್ಮಕ್ಕಳಿಗೆ ಸಿಗಬೇಕಿತ್ತು ಅಷ್ಟೇ ಅದಕ್ಕೆ ಹೀಗೆ ಮಾಡಿದ್ದೇನೆ ಎಂದಿದ್ದಾಳೆ.


Spread the love

LEAVE A REPLY

Please enter your comment!
Please enter your name here