ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ಡೇ: ಜೈಲಾ? ಬೇಲಾ? – ಇಂದು ಉಡುಪಿ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ!

0
Spread the love

ಉಡುಪಿ:– ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ಮಹತ್ವದ ದಿನವಾಗಿದೆ.

Advertisement

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದಕ್ಕೆ ಬ್ರಹ್ಮಾವರ ಪೊಲೀಸರು ಮಹೇಶ್ ತಿಮರೋಡಿಯನ್ನು ಬಂಧಿಸಿ ಆನಂತರ ಹೈಡ್ರಾಮಾ ನಡೆದು ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಹಿರಿಯಡ್ಕ ಸಬ್ ಜೈಲಿನಲ್ಲಿರುವ ಮಹೇಶ್ ತಿಮರೋಡಿ ಪ್ರತ್ಯೇಕ ಸೆಲ್‌ನಲ್ಲಿ ಚಡಪಡಿಸುತ್ತಾ ಎರಡು ದಿನ ಕಳೆದಿದ್ದಾರೆ. ತಿಮರೋಡಿ ಭೇಟಿಗೆ ಬಂದ ಬೆಂಬಲಿಗರಿಗೆ ಅವಕಾಶವೂ ಸಿಕ್ಕಿಲ್ಲ. ಬಿಪಿ ಏರುಪೇರು ಆದ ಕಾರಣ ವೈದ್ಯರನ್ನು ಕರೆಸಿ ತಪಾಸಣೆ ಮಾಡಿಸಲಾಗಿದೆ.

ಗುರುವಾರ ಬ್ರಹ್ಮಾವರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಸಂಚಾರಿ ಪೀಠವಾದ ಕಾರಣ ಇಂದು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಒಟ್ಟಾರೆ ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿ ಜೈಲು ಸೇರಿರುವ ತಿಮರೋಡಿಗೆ ಇಂದು ಕೋರ್ಟ್‌ನಲ್ಲಿ ಬೇಲ್ ಸಿಗುತ್ತಾ? ಇಲ್ವಾ ಅನ್ನೋದು ಸದ್ಯದ ಕುತೂಹಲದ ಸಂಗತಿಯಾಗಿದೆ.


Spread the love

LEAVE A REPLY

Please enter your comment!
Please enter your name here