ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ‘ಕೈ’ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅರೆಸ್ಟ್: ಕಂತೆ-ಕಂತೆ ಹಣ, ಚಿನ್ನ ಸೀಜ್!

0
Spread the love

ಬೆಂಗಳೂರು:– ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

Advertisement

ಇಡಿ ದಾಳಿ ವೇಳೆ ಕೋಟ್ಯಂತರ ರೂ ನಗದು ಸೇರಿ ವಿದೇಶಿ ಕರೆನ್ಸಿಗಳು ಪತ್ತೆ ಆಗಿದ್ದು, ಇಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ದಾಳಿ ಮಾಡಿ ಇದೀಗ ಅವರನ್ನು ಬಂಧಿಸಲಾಗಿದೆ. ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ ಇಡಿ ಅಧಿಕಾರಿಗಳು, ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಕೋಟ್ಯಂತರ ರೂ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ಮತ್ತು ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಪಪ್ಪಿ ಮನೆಯಲ್ಲಿ ಸಿಕ್ಕಿದ್ದೆಷ್ಟು?

ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ನಿನ್ನೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿ 12.45ಕ್ಕೆ ದಾಳಿ ಅಂತ್ಯಗೊಳಿಸಿದ್ದಾರೆ. ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ವೇಳೆ 1 ಕೋಟಿ ರೂ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ರೂ ನಗದು ಪತ್ತೆ ಆಗಿದೆ. 6 ಕೋಟಿ ರೂ. ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳು, 17 ಬ್ಯಾಂಕ್ ಅಕೌಂಟ್ಸ್ ಮತ್ತು 2 ಲಾಕರ್ ಜಪ್ತಿ ಮಾಡಲಾಗಿದೆ.

ಇನ್ನು ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲ್ಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊ, ಕ್ಯಾಸಿನೊ ಜ್ಯುವೆಲ್​ ಹೀಗೆ ಅಂತಾರಾಷ್ಟ್ರೀಯ ಕ್ಯಾಸಿನೊ ಸದಸ್ಯತ್ವ, ವಿವಿಧ ಬ್ಯಾಂಕ್‌ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು ಮತ್ತು ತಾಜ್, ಹಯಾತ್, ಲೀಲಾ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳನ್ನು ಕೆ.ಸಿ.ವೀರೇಂದ್ರ ಪಪ್ಪಿ ಹೊಂದಿದ್ದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here