ಮಂಗಳೂರು:- ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನದ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಎಸ್‌ಐಟಿ ತನಿಖೆ ಹಂತದಲ್ಲಿ ನಾನು ಹೆಚ್ಚು ಮಾತನಾಡಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸುವ ಎಲ್ಲರಿಗೂ ಧನ್ಯವಾದಗಳು ಎಂದರು. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೇ ಇರಲಿ. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದು ಭಕ್ತರ ಬಳಿ ತುಳುವಿನಲ್ಲಿ ಮಾತನಾಡಿದ್ದಾರೆ.
ಮುಸುಕುಧಾರಿ ಚಿನ್ನಯ್ಯ ಅರೆಸ್ಟ್:
ತಲೆಬುರುಡೆ ತಂದ ಕೇಸ್ನಲ್ಲಿ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದಾರೆ. ಈ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ ಮಾಸ್ಕ್ಮ್ಯಾನ್ ನನ್ನ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ನ್ಯಾಯಾಲಯ ಚಿನ್ನಯ್ಯನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಮಾಸ್ಕ್ಮ್ಯಾನ್ ನನ್ನು ಬಂಧಿಸಿದ್ದು ಹೇಗೆ?
ಪ್ರಕರಣದಲ್ಲಿ ಅನಾಮಿಕ ದೂರುದಾರನನ್ನು ಸಾಕ್ಷಿದಾರನನ್ನಾಗಿ ಪರಿಗಣಿಸಲಾಗಿತ್ತು. ಹೀಗಾಗಿ, ಸಾಕ್ಷ್ಯ ಸಂರಕ್ಷಣಾ ಕಾಯ್ದೆಯಡಿ ಆತನನ್ನು ರಕ್ಷಣೆ ಮಾಡಲಾಗುತ್ತಿತ್ತು. ಆದರೆ ಎಸ್‌ಐಟಿ ಅಧಿಕಾರಿಗಳ ಸತತ ವಿಚಾರಣೆ ಈತನ ಬಂಡವಾಳ ಬಯಲು ಮಾಡಿದೆ. ಬಳಿಕ ಆತನನ್ನು ಬಂಧಿಸಲಾಗಿದೆ.