ಕಲಬುರಗಿ:- ಜಿಲ್ಲೆಯ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಗುಟ್ಕಾ ತಿನ್ನಬೇಡ, ಶರೀರ ಹಾಳಾಗುತ್ತದೆ ಎಂದು ಅಜ್ಜಿ ಬುದ್ಧಿವಾದ ಹೇಳಿದ್ದಕ್ಕೆ, ಮೊಮ್ಮಗನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ರೋಹಿತ್ ಮಣ್ಣಾಂಕಲಗಿ ಗುರುತಿಸಲಾಗಿದೆ. ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ರೋಹಿತ್ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ದಮಯಂತಿ ಎಂಬ ಅಜ್ಜಿ ತನ್ನ ಮೊಮ್ಮಗನನ್ನು ಕಳೆದ ಏಳೆಂಟು ವರ್ಷಗಳಿಂದ ಸಾಕಿ ಸಲುಹಿ, ವಿದ್ಯಾಭ್ಯಾಸ ಕೊಡಿಸುತ್ತಿದ್ದಳು. ಅಜ್ಜಿಗೆ ಮೊಮ್ಮಗ ಗುಟ್ಕಾ ತಿನ್ನುವ ವಿಚಾರ ಆತನ ಸ್ನೇಹಿತರಿಂದ ಗೊತ್ತಾಗಿದ್ದು, ತಿನ್ನಬೇಡಾ ಎಂಬ ಬುದ್ಧಿಮಾತುಗಳನ್ನು ಹೇಳಿದ್ದಾರೆ.
ಬುದ್ಧಿವಾದದ ಮಾತುಗಳನ್ನು ಹೇಳಿದ ಒಂದೇ ಕಾರಣಕ್ಕಾಗಿ, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



