ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಎಚ್ಎಂಟಿ ರಸ್ತೆ, ಆರ್ ಎನ್ಎಸ್ ಅಪಾರ್ಟ್ ಮೆಂಟ್, ಸಿಎಂಟಿಐ, ಬೋರಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಪೋನ್ ಎಕ್ಸ್ ಚೇಂಜ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮಲಯಾಳಿ ಅತಿಥಿಗೃಹ ರಸ್ತೆ, ಕೆಎಚ್ ಬಿ ಲೇಔಟ್, ಯುಕೊ ಬ್ಯಾಂಕ್ ರಸ್ತೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜೆಕೆಡಬ್ಲೂ ಲೇಔಟ್, ಇಎಸ್ಐಸಿ ಆಸ್ಪತ್ರೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ.
ನೆಲಗೆದರನಹಳ್ಳಿ, ಸಬ್ ಸ್ಟೇಷನ್ ವ್ಯಾಪ್ತಿಯ ಕೆಂಪಯ್ಯ ಗಾರ್ಡನ್, ಶಿಗರಳಪಾಳ್ಯ ಮುಖ್ಯರಸ್ತೆ, ಮಾರುತಿ ಇಂಡಸ್ಟ್ರಿಯಲ್ ಎಸ್ಟೇಟ್, ಎಚ್ ಎಂಟಿ ಲೇಜೌಟ್, ಶಿವಪುರ, ಗೃಹಲಕ್ಷಿ ಲೇಔಟ್, ಶಿವಪುರ ಲೇಔಟ್, ವಿನಾಯನಗರ, 8ನೇ ಮೈಲಿ ರಸ್ತೆ, ಜಾಲಹಳ್ಳಿ ಕ್ರಾಸ್, ಶೋಭಾ ಅಪಾರ್ಟ್ ಮೆಂಟ್, ಅಮರಾಮತಿ ಲೇಔಟ್, ಕೆಎಪಿಎಲ್, ಕರ್ನಾಟಕ ಆ್ಯಂಟಿಬಯೋಟಿಕ್ಸ್ ಪ್ರೈವೇಟ್ ಲಿಮಿಟೆಡ್, ರುಕ್ಮಿಣಿನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.