ರಾಮನಗರ:- ಕಳ್ಳತನ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.
Advertisement
ಅಮಾನತುಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಎಂ.ಕೆ.ದೊಡ್ಡಿ ಠಾಣೆಯ ಎಎಸ್ಐ ನಾಗರಾಜು, ಕಾನ್ಸ್‌ಟೇಬಲ್‌ಗಳಾದ ಪ್ರತಾಪ್, ಲಕ್ಷ್ಮೀನಾರಾಯಣ ಹಾಗೂ ಸೋಮನಾಥ್ ಎಂದು ಹೇಳಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಈ ಆದೇಶ ಹೊರಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿ ರಮೇಶ್, ಆಗಸ್ಟ್ 20ರಂದು ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಹೀಗಾಗಿ ಕರ್ತವ್ಯ ಲೋಪ ಕಂಡುಬಂದ ಹಿನ್ನಲೆ ಎಎಸ್ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿಯನ್ನ ಅಮಾನತು ಮಾಡಲಾಗಿದೆ.