ಬಿಕ್ಲು ಶಿವ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಎ1 ಆರೋಪಿ ಜಗ್ಗ ಅರೆಸ್ಟ್!

0
Spread the love

ಬೆಂಗಳೂರು:- ಕಳೆದ ಕೆಲವು ತಿಂಗಳುಗಳ ಹಿಂದೆ ನಗರದಲ್ಲಿ ಭೀಕರವಾಗಿ ಹತ್ಯೆಯಾಗಿದ್ದ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟು ದಿನ ತಲೆಮರೆಸಿಕೊಂಡಿದ್ದ A1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

Advertisement

ಲುಕ್‌ಔಟ್ ನೋಟಿಸ್ ಜಾರಿ ಹಿನ್ನೆಲೆ ದೆಹಲಿ ಏರ್‌ಪೋರ್ಟ್‌ನಲ್ಲಿ ಜಗ್ಗ ಲಾಕ್ ಆಗಿದ್ದಾನೆ. ಜಗ್ಗನನ್ನು ವಶಕ್ಕೆ ಪಡೆದು ಸಿಐಡಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಸದ್ಯ ಜಗ್ಗನನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ಆತನನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಜಗದೀಶ್ ಅಲಿಯಾಸ್ ಜಗ್ಗನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಬಳಿಕ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗ ಸೇರಿ ಈವರೆಗೆ 21 ಆರೋಪಿಗಳನ್ನು ಬಂಧಿಸಲಾಗಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜಗದೀಶ್ ಪ್ರಮುಖ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ.


Spread the love

LEAVE A REPLY

Please enter your comment!
Please enter your name here