ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಸಂಬಂಧಿತ ಪ್ರಕರಣದ ತನಿಖೆಯಲ್ಲಿ ಎಸ್ಐಟಿ ಮಹತ್ವದ ಪ್ರಗತಿ ಸಾಧಿಸಿದೆ. ಸಾಕ್ಷಿಯಾಗಿ ಬಂದ ಚಿನ್ನಯ್ಯನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಇನ್ನೂ ಈ ಸಂಬಂಧ ಬೆಳ್ತಂಗಡಿಯ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ದೂರುದಾರನಾಗಿದ್ದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಹಿನ್ನೆಲೆ ದಾಳಿ ನಡೆಸಿದೆ. ಈ ವೇಳೆ ಚಿನ್ನಯ್ಯನ ಮೊಬೈಲ್ ಪತ್ತೆ ಆಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಶೋಧಕ್ಕೆ ಸರ್ಚ್ ವಾರಂಟ್ (ನ್ಯಾಯಾಲಯದ ಅನುಮತಿ) ಪಡೆದ ಎಸ್ ಐ ಟಿ, ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ತಿಮರೋಡಿ ಮನೆಗೆ ಮಹಜರು ನಡೆಸಿ ತೀವ್ರ ಶೋಧ ನಡೆಸಿತು.
ಮಹೇಶ್ ತಿಮರೋಡಿ ಹಾಗೂ ಆವರ ಸಹೋದರ ಮೋಹನ್ ಕುಮಾರ್ ಶೆಟ್ಟಿ ಮನೆಯಲ್ಲಿ ಕೂಡಾ ಎಸ್ ಐಟಿ ತನಿಖೆ ನಡೆಸುತ್ತಿದೆ. ಜಿತೇಂದ್ರ ದಯಾಮ ಸೇರಿದಂತೆ ಹಲವು ಅಧಿಕಾರಿಗಳ ತಂಡ ಕೆಲಸ ಮಾಡುತ್ತಿದೆ. ಚಿನ್ನಯ್ಯನ 25 ವಿಡಿಯೋಗಳನ್ನು ಮಾಡಲಾಗಿದೆ. ಈಗಾಗಲೆ 3 ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ.