ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ DCM ಡಿಕೆ ಶಿವಕುಮಾರ್: ಜೆಡಿಎಸ್ ವ್ಯಂಗ್ಯ

0
Spread the love

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧೀಸಿದಂತೆ ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಂತ ಜೆಡಿಎಸ್ ವ್ಯಂಗ್ಯವಾಡಿದೆ.

Advertisement

ಈ ಕುರಿತು x ನಲ್ಲಿ ಪೋಸ್ಟ್‌ ಮಾಡಿದ JDS, ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ.ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು,

ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ. ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. ಕಾಂಗ್ರೆಸ್ (Congress) ಹೈಕಮಾಂಡ್‌ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂದು ಟೀಕಿಸಿದೆ.


Spread the love

LEAVE A REPLY

Please enter your comment!
Please enter your name here