ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಮತ್ತೆ ಏರಿಕೆ!

0
Spread the love

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದು ಚಿನ್ನದ ಬೆಲೆ ಮತ್ತೆ ಏರಿಕೆ ಆಗಿದೆ.

Advertisement

ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿಕೆ ಆಗಿದೆ. ಗೌರಿ ಹಬ್ಬದ ದಿನ 50 ರೂ ಏರಿದ್ದ ಚಿನ್ನದ ಬೆಲೆ ಇವತ್ತು ಗಣೇಶ ಹಬ್ಬದ ದಿನ 35 ರೂ ಹೆಚ್ಚಳಗೊಂಡಿದೆ. ನಿನ್ನೆ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,000 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 27ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,900 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,440 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,830 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,900 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,440 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ.


Spread the love

LEAVE A REPLY

Please enter your comment!
Please enter your name here