ಬೆಂಗಳೂರು: ಕರ್ನಾಟಕದಾದ್ಯಂತ ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.
Advertisement
ಮೆಜೆಸ್ಟಿಕ್, ಶಾಂತಿನಗರ, ಕಾರ್ಪೊರೇಷನ್, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರಂ, ಜಯನಗರ, ಬಸವನಗುಡಿ, ಕೆಆರ್ ಮಾರ್ಕೆಟ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.
ಇನ್ನು ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣಗೊಂಡಿದೆ. ಹೀಗಾಗಿ ವಾಹನ ಸವಾರರು ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.
ಅದರಲ್ಲೂ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ನೀರಿನಿಂದ ತೊಂದರೆ ಉಂಟಾಗುತ್ತಿದೆ. ಛತ್ರಿ ಹಿಡಿದುಕೊಂಡು ರೈನ್ ಕೋಟ್ ಧರಿಸಿ ಜನರ ಓಡಾಡುತ್ತಿದ್ದಾರೆ. ಮಧ್ಯಾಹ್ನದ ಬಳಿಕ ಎಂಟ್ರಿ ಕೊಟ್ಟ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.