ನವದೆಹಲಿ: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಸದ್ಯ ಇದೀಗ ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೇ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು,
Advertisement
ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎನ್ನುವ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ. ಚಾಮುಂಡಿಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಶಿವಕುಮಾರ್ ಹೇಳುತ್ತಾರೆ, ಇತ್ತಿಚಿಗೆ ಅವರು ವಿಧಾನಸಭಾ ಆಧಿವೇಶನದಲ್ಲಿ ಆರೆಸ್ಸೆಸ್ ಪ್ರಾರ್ಥನಾ ಗೀತೆಯನ್ನು ಹಾಡಿ ವಿವಾದ ಸೃಷ್ಟಿಸಿದ್ದರು,
ಆದರೆ ಅವರು ಹಾಗೆ ಮಾಡಿದ್ದು ದೆಹಲಿಯಲ್ಲಿರುವ ವರಿಷ್ಠರನನ್ನು ಕೆರಳಿಸಿತ್ತು ಎಂದು ಹೇಳಿದರು. ಹೈಕಮಾಂಡ್ ಗಮನ ಆ ವಿಷಯದಿಂದ ಬೇರೆಡೆ ಸೆಳೆಯಲು ಶಿವಕುಮಾರ್ ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಅಂತ ಹೇಳಿದ್ದಾರೆ, ಅವರ ಮಾತಿನ ಅರ್ಥವೇನು? ಎಂದು ಪ್ರಶ್ನಿಸಿದ್ದಾರೆ.