ಬೆಂಗಳೂರು: ಡಿ.ಕೆ ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ವಿವಾದದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
Advertisement
ಡಿ.ಕೆ. ಶಿವಕುಮಾರ್‌ರಿಂದ ಆರ್‌ಎಸ್‌ಎಸ್ ಗೀತೆಯನ್ನು ಹಾಡಿರುವುದು ತಪ್ಪಾಯಿತು. ಹೇಳಬಾರದಿತ್ತು, ಆದರೆ, ಅವರು ಈಗ ಕ್ಷಮೆ ಕೇಳಿದ್ದಾರೆ. ಈ ವಿಷಯವನ್ನು ಇಲ್ಲಿಗೆ ಮುಗಿಯಲಿ ಎಂದು ಭಾವಿಸುತ್ತೇವೆ ಎಂದು ಹೇಳಿದರು.
ಧರ್ಮಸ್ಥಳ ಕೇಸ್ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲಾ ಕ್ಲೋಸ್ ಆಗಿದೆ. ಮತ್ತೆ ಯಾಕೆ ಓಪನ್ ಮಾಡ್ತೀರಾ ಎಂದರು. ಇದೇ ವೇಳೆ, ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳನ್ನು ಖರ್ಗೆ ತಿಳಿಸಿದರು. ಎಲ್ಲರಿಗೂ ಒಳ್ಳೆಯದಾಗಲಿ, ರಾಜ್ಯ ಸುರಕ್ಷಿತವಾಗಿರಲಿ ಎಂದು ಆಶಿಸಿದರು.