ಬೆಂಗಳೂರು:– ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಧಪಟ್ಟಂತೆ ಬೆಂಗಳೂರು ಜೈಲಲ್ಲಿ ಉಗ್ರನಿಗೆ ಇಡಿ ಡ್ರಿಲ್ ತೆಗೆದುಕೊಂಡಿದೆ.
Advertisement
ಪರಪ್ಪನ ಅಗ್ರಹಾರ ಜೈಲಲ್ಲಿ ಶಾರಿಕ್‌ನನ್ನು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಉಗ್ರರಿಗೆ ಅಕ್ರಮ ಹಣ ಸಂದಾಯ ಆಗಿರುವ ಬಗ್ಗೆ ತನಿಖೆಯಲ್ಲಿ ಗೊತ್ತಾಗಿದೆ. ಕೆಲ ಮುಸ್ಲಿಂ ರಾಷ್ಟ್ರಗಳಿಂದ ಆರೋಪಿಗಳಿಗೆ ಹಣ ಸಂದಾಯ ಆಗಿರೋದು ಎನ್‌ಐಎ ಹಾಗೂ ಇ.ಡಿ ತನಿಖೆ ವೇಳೆ ಅಕ್ರಮ ಹಣದ ವ್ಯವಹಾರ ಬಗ್ಗೆ ಮಾಹಿತಿ ಸಿಕ್ಕಿತ್ತು.
ಈ ಸಂಬಂಧ ಶಂಕಿತ ಉಗ್ರ ಶಾರಿಕ್ ಹಾಗೂ ಪ್ರಕರಣದ ಇತರ ಆರೋಪಿಗಳ ವಿಚಾರಣೆ ನಡೆಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಜೈಲಿಗೆ ಭೇಟಿ ನೀಡಿದ ಇಡಿ ಅಧಿಕಾರಿಗಳು ಜೈಲಿನಲ್ಲಿ ಶಂಕಿತ ಉಗ್ರರ ವಿಚಾರಣೆ ನಡೆಸಿ ಹೋಗಿದ್ದಾರೆ.