ಬೆಂಗಳೂರು:- ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಮತ್ತಷ್ಟು ಜೋರಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್ಎಎಲ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.