ಬೆಳಗಾವಿ: ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಒಂಭತ್ತು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠ ರಾಷ್ಟ್ರೀಯ ಹೆದ್ದಾರಿ ಘಾಟ್ ನಲ್ಲಿ ಜರುಗಿದೆ.
Advertisement
ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಗೋಗಟೆ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾಗಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 12 ಜನ ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಓರ್ವ ಮಹಿಳೆ, ಓರ್ವ ಪುರುಷ ಸಾವನ್ನಪ್ಪಿದ್ದಾರೆ.
ಅಪಘಾತ ಸಂಭವಿಸಿದ ಬಳಿಕ ಒಂಬತ್ತು ಜನರನ್ನ ಹಿರೇಬಾಗೇವಾಡಿ ಠಾಣೆ ಸಿಬ್ಬಂದಿ ಮತ್ತು ಸ್ಥಳೀಯರು ರಕ್ಷಣೆ ಮಾಡಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.