Home Gadag News ಗಣೇಶ ಮೂರ್ತಿಯ ಭವ್ಯ ಮೆರವಣಿಗೆ

ಗಣೇಶ ಮೂರ್ತಿಯ ಭವ್ಯ ಮೆರವಣಿಗೆ

0
ಗಣೇಶ ಮೂರ್ತಿಯ ಭವ್ಯ ಮೆರವಣಿಗೆ
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಪಂ.ಪಂಚಾಕ್ಷರಿ ಗವಾಯಿಗಳವರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ ಎ.ಪಿ.ಎಂ.ಸಿ ಯಾರ್ಡ್, ಗದಗ ದಲಾಲ ವರ್ತಕರ ಹಾಗೂ ಖರೀದಿದಾರರ ಸಂಘದ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ಗಣೇಶ ಚತುರ್ಥಿ ನಿಮಿತ್ತ ಬುಧವಾರ ನಗರದ ಮಸಾರಿ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸಿ ಅಲ್ಲಿಂದ ಎ.ಪಿ.ಎಂ.ಸಿ ಮಾರುಕಟ್ಟೆಯವರಗೆ ವಾದ್ಯ ಮೇಳಗಳೊಂದಿಗೆ ಗಣೇಶನ ಭವ್ಯ ಮೆರವಣಿಗೆ ಜರುಗಿತು.

ನಂತರ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಫಲ-ಪುಷ್ಪಗಳಿಂದ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿಯ ಅಧ್ಯಕ್ಷ ತಿಮ್ಮರೆಡ್ಡಿ ಕೋನರೆಡ್ಡಿ, ಗೌರವ ಅಧ್ಯಕ್ಷ ಪ್ರಮೋದ್ ವಾರಕರ, ಕಾರ್ಯದರ್ಶಿ ರಾಜು ಮುಧೋಳ, ಉಪಾಧ್ಯಕ್ಷ ರಾಜು ಮೂಲಿಮನಿ, ಸಹ ಕಾರ್ಯದರ್ಶಿ ಚಂದ್ರಕಾಂತ ಸವದತ್ತಿ, ಖಜಾಂಚಿ ಮಹೇಶ ಗಾಣಗೇರ, ಸಹ ಖಜಾಂಚಿ ನಿತೀಶ ವಾಲಿ, ವಿನಾಯಕ ವಜ್ರೇಶ್ವರಿ, ವಿವೇಕಾನಂದ ಗುಡಿಮನಿ, ಕೊಟ್ರೇಶ ಬಾಳಿಕಾಯಿ, ಗಿರೀಶ ಅಳವಂಡಿ, ದಯಾನಂದ ದುಂಡಪ್ಪನವರ, ವಿನಯ ಕಾಡಪ್ಪನವರ, ಬಸವರಾಜ ಕಾಡಪ್ಪನವರ, ಪ್ರವೀಣ, ವಿನೀತ ಕವಲೂರ, ಶರತ್ ಅಗಡಿ, ಸಾಗರ ವಜ್ರೇಶ್ವರಿ, ಅಜೀತ ಪುಣೇಕರ್, ಬಸವರಾಜ ಬಾವಿಕಟ್ಟಿ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here