Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಕಟ್: ಎಲ್ಲೆಲ್ಲಿ?

0
Spread the love

ಬೆಂಗಳೂರು:- ಇಂದು ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Advertisement

ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಆಗಸ್ಟ್‌ 29ರ ಇಂದು ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅದರಂತೆ ಮಂಜುನಾಥ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್‌, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ್ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮಿ ನಗರ, ಎಚ್‌ವಿಕೆ ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿಜೆಎಸ್ಎಸ್ ಲೇಔಟ್, ವಾರ್ಡ್ ಕಚೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್‌ ಬ್ಯಾಂಕ್, ಹಂಸಲೇಕ ಮನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಲ್ಲದೆ, ಶಂಕರಮಠ, ಪೈಪ್‌ಲೈನ್ ರಸ್ತೆ, ಜೆ.ಸಿ. ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇಎಸ್ಐ ಆಸ್ಪತ್ರೆ, ಕಮಲಾ ನಗರ ಮುಖ್ಯ ರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ. ಬೋವಿ ಪಾಳ್ಯ ಮೈಕೋ ಲೇಔಟ್, ಜಿ.ಡಿ. ನಾಯ್ಡು ಹಾಲ್, ವೆಸ್ಟ್‌ ಆಫ್‌ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್‌, ಎಸ್ಕಾನ್ ಎಫ್‌ಎಸ್ಐಟಿ ರಸ್ತೆ, ಬಿಎನ್‌ಇಎಸ್ ಕಾಲೇಜು, ಬಿಇಎಲ್‌ಎಸ್‌ ಕಾಲೇಜು, ಬೆಲ್‌ ಸೋಪ್ವಾನ್ ಅಪಾರ್ಟ್‌ಮೆಂಟ್, ಯೆಸ್‌ ಹವಾನ ಅಪಾರ್ಟ್‌ಮೆಂಟ್, ಇಂಡಲ್ ಏರಿಯಾ, ಟೊಯೋಟಾ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.


Spread the love

LEAVE A REPLY

Please enter your comment!
Please enter your name here