Home Bengaluru News ಪೊಲೀಸ್ ಮೇಲೆಯೇ ಕಾರು ಹತ್ತಿಸಲು ಮುಂದಾದ ಕುಡುಕರ ಗ್ಯಾಂಗ್: ಆಗಿದ್ದೇನು?

ಪೊಲೀಸ್ ಮೇಲೆಯೇ ಕಾರು ಹತ್ತಿಸಲು ಮುಂದಾದ ಕುಡುಕರ ಗ್ಯಾಂಗ್: ಆಗಿದ್ದೇನು?

0
ಪೊಲೀಸ್ ಮೇಲೆಯೇ ಕಾರು ಹತ್ತಿಸಲು ಮುಂದಾದ ಕುಡುಕರ ಗ್ಯಾಂಗ್: ಆಗಿದ್ದೇನು?
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಜಗೋಪಾಲ ನಗರದಲ್ಲಿ ಕುಡುಕರ ಗ್ಯಾಂಗ್ ಪಿಎಸ್‍ಐ ಮೇಲೆ ಕಾರು ಹತ್ತಿಸಲು ಯತ್ನಿಸಿದ ಘಟನೆ ಜರುಗಿದೆ.

ಎಸ್, ರಾಜಗೋಪಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಒಂದರ ಬಳಿ ರಾಜಗೋಪಲನಗರ ಸಬ್ ಇನ್ಸ್‌ಪೆಕ್ಟರ್ ಮುರಳಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಸ್ಕಾರ್ಪಿಯೋ ಕಾರಿನಲ್ಲಿ ನಾಲ್ಕೈದು ಜನ ಮದ್ಯಪಾನ ಮಾಡುತ್ತಿದ್ದರು. ಬಾರ್ ಕ್ಲೋಸ್ ಆಗಿದ್ದರೂ ಸಹ, ಕೈನಲ್ಲಿ ಗ್ಲಾಸ್ ಹಿಡಿದು ಪುಂಡರು ಮೋಜು ಮಸ್ತಿಯಲ್ಲಿ ತೊಡಗಿದ್ದರು.

ಕಾರಿನ ವಿಂಡೋ ಗ್ಲಾಸ್ ಇಳಿಸುವಂತೆ ಪಿಎಸ್‍ಐ ಹೇಳಿದ್ದಾರೆ. ಈ ವೇಳೆ, ಏಕಾಏಕಿ ಕಾರನ್ನು ರಿವರ್ಸ್ ತೆಗೆದು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಪಿಎಸ್‍ಐ ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರು ಜಾನ್ಸನ್ ಎಂಬವನಿಗೆ ಸೇರಿರುವುದು ಎಂದು ತಿಳಿದು ಬಂದಿದೆ. ಪೊಲೀಸರು ಪುಂಡರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಒಟ್ಟಾರೆ ಸಿಲಿಕಾನ್ ಸಿಟಿಯಲ್ಲಿ ಪುಂಡರ ಹಾವಳಿ ಮಿತಿ ಮೀರಿದ್ದು, ಇವರ ಆಟೋಪಗಳಿಗೆ ಬ್ರೇಕ್ ಹಾಕಬೇಕಾಗಿದೆ.


Spread the love

LEAVE A REPLY

Please enter your comment!
Please enter your name here