HomeKarnataka Newsಸಕಲೇಶಪುರ: ರಸ್ತೆಗೆ ಮರ ಕೆಡವಿ ವಾಹನ ಸವಾರರನ್ನು ತಡೆದ ಒಂಟಿ ಸಲಗ!

ಸಕಲೇಶಪುರ: ರಸ್ತೆಗೆ ಮರ ಕೆಡವಿ ವಾಹನ ಸವಾರರನ್ನು ತಡೆದ ಒಂಟಿ ಸಲಗ!

For Dai;y Updates Join Our whatsapp Group

ಸಕಲೇಶಪುರ :ಒಂಟಿ ಸಲಗವೊಂದು ರಸ್ತೆಗೆ ಅಡ್ಡಲಾಗಿ ಮರ ಬೀಳಿಸಿ ವಾಹನ ಸವಾರರು ಪರದಾಡುವಂತೆ ಮಾಡಿದ ಘಟನೆ ಸಕಲೇಶಪುರದ ಹಳ್ಳಿಬೈಲು ಗ್ರಾಮದ ಬಳಿ ನಡೆದಿದೆ.

ಎಸ್, ಗುರುವಾರ ರಾತ್ರಿ, ಗ್ರಾಮದ ಬಳಿ ದೈತ್ಯಾಕಾರದ ಒಂಟಿಸಲಗ ಬೈನೆ ಮರವನ್ನು ನೆಲಕ್ಕುರುಳಿಸಿ ಆರಾಮಾಗಿ ತಿನ್ನುತ್ತಾ ನಿಂತಿತ್ತು. ಇದರಿಂದ ಕೆಲಕಾಲ ಹಲವಾರು ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿದ್ದವು. ಕೆಲಕಾಲ ವಾಹನ ಸವಾರರು ಇದರಿಂದ ಪರದಾಡಿದ್ದಾರೆ. ಬಳಿಕ ವಿಡಿಯೋ ಮಾಡಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬರುವಂತೆ ಚಾಲಕರು ಒತ್ತಾಯಿಸಿದ್ದರು.

ಸ್ಥಳಕ್ಕೆ ಇಟಿಎಫ್ ಸಿಬ್ಬಂದಿ ಬಂದು ಪಟಾಕಿ ಸಿಡಿಸಿ ಸಲಗವನ್ನು ಕಾಡಿಗೆ ಓಡಿಸಿದ್ದಾರೆ. ಬಳಿಕ ಸುರಿಯುತ್ತಿರುವ ಮಳೆಯಲ್ಲಿಯೇ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img