ಲಿಂ. ಡಾ. ಶಿವರಾತ್ರಿ ಸ್ವಾಮಿಗಳು ಎಂದಿಗೂ ಪ್ರಸ್ತುತ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಲಿಂಗೈಕ್ಯ ಡಾ. ಶಿವರಾತ್ರಿ ಮಹಾಸ್ವಾಮಿಗಳು ಬಾಲ್ಯಾವಧಿಯಿಂದಲೂ ಸಮಾಜಮುಖಿ ಜೀವನ ನಡೆಸುತ್ತ ಲಿಂಗದೀಕ್ಷೆ ನಂತರ ತಮ್ಮನ್ನು ಸಂಪೂರ್ಣ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮಾನವಕುಲದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಇಂದಿಗೂ ಪ್ರಸ್ತುತರಾಗಿದ್ದಾರೆಂದು ನಿವೃತ್ತ ಕನ್ನಡ ಪ್ರಾಧ್ಯಾಪಕಿ ಡಾ. ಶಕುಂತಲಾ ಸಿಂಧೂರ ಹೇಳಿದರು.

Advertisement

ಅವರು ಗದಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಸಂಯುಕ್ತವಾಗಿ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಐಕ್ಯೂಎಸಿ ಘಟಕದ ಅಡಿಯಲ್ಲಿ ಹಮ್ಮಿಕೊಂಡಿದ್ದ ‘ಲಿಂ. ಡಾ. ಶಿವರಾತ್ರಿ ಸ್ವಾಮಿಗಳ ಜನ್ಮದಿನ’ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು.

ಶ್ರೀಗಳು ಗದಗ ನಗರದಲ್ಲಿ ಶರಣ ಸಾಹಿತ್ಯ ಪರಿಷತ್ತು ಸ್ಥಾಪಿಸುವ ಮೂಲಕ ಜಿಲ್ಲೆಯಲ್ಲಿ ಶರಣರ ಸಂದೇಶಗಳ ಚಿಂತನೆ ಸದಾಕಾಲ ಮುಂದುವರೆಯುವಂತೆ ಮಾಡಿರುವುದು ಶ್ಲಾಘನೀಯ. ಅವರ ಜೀವನ ಮತ್ತು ಲೋಕಕಲ್ಯಾಣ ಕಾರ್ಯಗಳನ್ನು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗದಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎ. ಬಳಿಗೇರ ಶರಣರ ನಡೆನುಡಿಯ ಅಗತ್ಯದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಸುಧಾ ಕೌಜಗೇರಿ ವಿದ್ಯಾರ್ಥಿಗಳು ಶರಣರ ಬದುಕನ್ನು ಅವಲೋಕಿಸಿ ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಉಪದೇಶಿಸಿದರು.

ಇತಿಹಾಸ ಪ್ರಾಧ್ಯಾಪಕ ಮತ್ತು ಎನ್.ಎಸ್.ಎಸ್ ಘಟಕದ ಸಂಯೋಜಕ ಡಾ. ಅಪ್ಪಣ್ಣ ಹಂಜೆ ಸ್ವಾಗತಿಸಿದರು. ಎಸ್.ಎಂ. ಮರಿಗೌಡ್ರ ನಿರೂಪಿಸಿದರು. ಡಿ.ಎಸ್. ಬಾಪುರಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕ ಡಾ. ಜಿತೇಂದ್ರ ಜಹಗೀರದಾರ, ಸಾಂಸ್ಕೃತಿಕ ವಿಭಾಗದ ಸಂಚಾಲಕ ರಮೇಶ ಹುಲಕುಂದ, ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಹುಸೇನಭಾಷಾ ಮತ್ತು ಮಹಾಂತೇಶ, ಇಂಗ್ಲಿಷ್ ಪ್ರಾಧ್ಯಾಪಕಿ ಸಾವಿತ್ರಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here