ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಕಾಲೇಜಿನಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಯಿತು.
ಪ್ರಾಚಾರ್ಯ ಬಿ.ಎಸ್. ಹಿರೇಮಠ ಮೇಜರ್ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹಾಕಿ ಆಟದಲ್ಲಿ ವಿಶೇಷ ಸಾಧನೆಗೈದ ಹಾಕಿ ಪಟು ಮೇಜರ್ ಧ್ಯಾನಚಂದ್ ಅವರ ಕ್ರೀಡಾ ಅಭಿಲಾಷೆಯನ್ನು ತಿಳಿಸಿ, ರಾಷ್ಟ್ರೀಯ ಕ್ರೀಡಾ ದಿನಾಚರಣೆ ಶುಭಾಶಯಗಳನ್ನು ತಿಳಿಸಿದರು.
ದೈಹಿಕ ನಿರ್ದೇಶಕ ಖಯುಮ ನವಲೂರ ವಿದ್ಯಾರ್ಥಿಗಳಿಗೆ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾ ಚಟುವಟಿಕೆಗಳ ಮಾಹಿತಿ ತಿಳಿಸಿ, ಕ್ರೀಡಾಪಟುಗಳನ್ನು ಸ್ಮರಿಸಿದರು. ಸಂಸ್ಥೆಯ ಚೆರಮನ್ ಎನ್.ಎಮ್. ಕುಡತರಕರ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಪ್ರಾಚಾರ್ಯ ಬಿ.ಎಸ್. ಹೀರೆಮಠ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ಖಜಾಂಚಿ ಸಂಜಯ ಕುಡತರಕರ, ನಿರ್ದೇಶಕ ಚೇತನ ಕುಡತರಕರ, ಸಂಯೋಜಕರುಗಳಾದ ಪ್ರೊ. ಸವಿತಾ ಪೂಜಾರ, ಪ್ರೊ. ಶಾಹೀದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.