ಮೈಸೂರು:– ಧರ್ಮಸ್ಥಳದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂಬ ಬಿಜೆಪಿ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದು, ಸಿಬಿಐ ಗೆ ಯಾವ ಪ್ರಕರಣವನ್ನು ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು. ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದರು. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದರು.
ತನಿಖೆ ನಡೆಯುವಾಗ ಎಲ್ಲಾ ಪಕ್ಷಗಳು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಮಾತನಾಡಿ, ಧರ್ಮದ ಪರವಾಗಿ ಯಾತ್ರೆ ಮಾಡುತ್ತಿದ್ದು, ದೂರಿನ ಆಧಾರದ ಮೇಲೆ ಸತ್ಯವನ್ನು ತಿಳಿಯಬೇಕಾಗಿದೆ ಎಂದರು.