HomeGadag Newsರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಿದೆ.

ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ 31 ಸಾವಿರ ರೂ, ದ್ವಿತೀಯ ಬಹುಮಾನ 21 ಸಾವಿರ ರೂ, ತೃತೀಯ ಬಹುಮಾನ 11 ಸಾವಿರ ರೂ ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ 3 ಸಾವಿರ ರೂ. ದ್ವಿತೀಯ ಬಹುಮಾನ 2 ಸಾವಿರ ರೂ ಮತ್ತು ತೃತೀಯ ಬಹುಮಾನ 1 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢಶಾಲಾ ವಿಭಾಗದಲ್ಲಿ: 1) ಸ್ವಚ್ಚತೆಯ ಪಾಠ-ಗಾಂಧೀಜಿಯವರ ಸಂದೇಶ, 2) ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ, 3) ಗಾಂಧೀಜಿಯವರ ಸ್ವಾತಂತ್ರ‍್ಯದ ಕನಸು-ನನ್ನ ಕಲ್ಪನೆ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು 700ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ವಿಭಾಗದಲ್ಲಿ: 1) ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ, 2) ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ, 3) ಬದಲಾವಣೆ ನನ್ನಿಂದಲೇ ಆರಂಭ-ಗಾAಧೀಜಿಯವರ ಪಾಠ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು 900ರಿಂದ 1000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ-ಸ್ನಾತಕೋತ್ತರ ಪದವಿ ವಿಭಾಗದಲ್ಲಿ: 1) ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ, 2) ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್-ತತ್ವಗಳ ಹೋಲಿಕೆ, 3) ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ-ಯುವಕರಿಗೆ ಗಾಂಧೀಜಿಯವರ ಪಾಠ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು 1400ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು ಪ್ರಬಂಧಗಳಿಗೆ ಅಕ್ಟೋಬರ್ 2ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.

ನಿಬಂಧನೆಗಳು: ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಅಕರವಾಗಿ ಬಳಸಿದ ಪರಾಮರ್ಶನ/ಅಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ/ಆಧಾರ ಗ್ರಂಥಗಳು/ಮೊಬೈಲ್‌ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾಯ್ದಿರಿಸಿಕೊಂಡಿರುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳು ಜಿಲ್ಲಾಡಳಿತದ ಸಹಯೋಗದೊಂದಿಗೆ 6-09-2025ರೊಳಗಾಗಿ ಸ್ಪರ್ಧೆ ಏರ್ಪಡಿಸಿ ನಂತರ ಮೌಲ್ಯಮಾಪನ ಮಾಡಿ 12-09-2025ರ ಒಳಗಾಗಿ ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಬೇಕು. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!