ಧರ್ಮಸ್ಥಳ ಪ್ರಕರಣ: ಬಿಜೆಪಿ ಮೂಲ ಕಾರ್ಯಕರ್ತರದ್ದೇ ಷಡ್ಯಂತ್ರ – ಡಿಸಿಎಂ ಡಿಕೆಶಿ!

0
Spread the love

ಬೆಂಗಳೂರು:- ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ಮೂಲ ಕಾರ್ಯಕರ್ತರೇ ಷಡ್ಯಂತ್ರ ಮಾಡಿರುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು.

Advertisement

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಎಸ್‌ಐಟಿ ಮಾಡಿರುವ ತನಿಖೆ ಬಗ್ಗೆ ಬಿಜೆಪಿ ಅವರಿಗೆ ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ, ಈಗ ನಾಟಕ ಮಾಡುತ್ತಿರುವವರು ಅವರೇ . ಎನ್‌ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ನೇರವಾಗಿ ಆರೋಪಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here