ಇಂದು ನಟ ಕಿಚ್ಚ ಸುದೀಪ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಸುದೀಪ್ ಬರ್ತಡೇಯನ್ನು ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಮತ್ತೊಂದೆಡೆ ಸುದೀಪ್ ಬರ್ತಡೇಯನ್ನು ಮತ್ತಷ್ಟು ಅದ್ದೂರಿಯಾಗಿಸಲು ಸುದೀಪ್ ನಟನೆಯ 47ನೇ ಸಿನಿಮಾದ ಟೈಟಲ್ ಹಾಗೂ ಟೀಸರ್ ಬಿಡುಗಡೆ ಮಾಡಲಾಗಿದೆ.
ಕಿಚ್ಚ ಸುದೀಪ್ ನಟನೆಯ 47ನೇ ಸಿನಿಮಾದ ಟೈಟಲ್ ಟೀಸರ್ ಹಾಗೂ ಲುಕ್ ಅನಾವರಣ ಮಾಡಲಾಗಿದೆ. ಇಷ್ಟು ದಿನ ಈ ಸಿನಿಮಾವನ್ನು ತಾತ್ಕಾಲಿಕವಾಗಿ ‘K 47’ ಎಂದು ಕರೆಯಲಾಗುತ್ತಿತ್ತು. ಇದೀಗ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಶೀರ್ಷಿಕೆ ರಿವೀಲ್ ಮಾಡಲಾಗಿದ್ದು ಚಿತ್ರಕ್ಕೆ ‘ಮಾರ್ಕ್’ ಎಂದು ಟೈಟಲ್ ಇಡಲಾಗಿದೆ.
‘ಮಾರ್ಕ್’ ಸಿನಿಮಾದಲ್ಲಿ ಸುದೀಲ್ ಸಖತ್ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ ಈ ಸಿನಿಮಾವನ್ನು ‘ಸತ್ಯಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್ಗಳು ಜೊತೆಯಾಗಿ ನಿರ್ಮಿಸುತ್ತಿದ್ದು, ಇದು ಸುದೀಪ್ ವೃತ್ತಿಜೀವನದಲ್ಲಿ ಒಂದು ಮೈಲಿಗಲ್ಲಾಗಲಿದೆ ಎಂದು ಚಿತ್ರತಂಡ ಹೇಳಿದೆ.
ಈ ಹಿಂದೆ ‘ಮ್ಯಾಕ್ಸ್’ ಸಿನಿಮಾದ ಮೂಲಕ ಬಿಗ್ ಹಿಟ್ ನೀಡಿದ್ದ ನಿರ್ದೇಶಕ ವಿಜಯ್ ಕಾರ್ತಿಕೇಯ ಇದೀಗ ಮಾರ್ಕ್ ಸಿನಿಮಾದ ಮೂಲಕ ಮತ್ತೊಂದು ಹಿಟ್ ನೀಡಲು ಸಜ್ಜಾಗಿದ್ದಾರೆ. ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದ್ದು ಆ ಕಾರಣದಿಂದಲೂ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ.