ಕೋಲಾರ:- ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಸಾವನ್ನಪ್ಪಿರುವ ಘಟನೆ ಅಮೆರಿಕದ ಟೆಕ್ಸಾಸ್‍ನಲ್ಲಿ ಜರುಗಿದೆ.
ಸುರೇಶ್ ಕುಮಾರ್ (42) ಮೃತ ದುರ್ದೈವಿ. ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿ ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ ದೈಹಿಕ ತರಬೇತಿಯನ್ನೂ ಸಹ ಅವರು ನೀಡಿದ್ದರು ಎನ್ನಲಾಗಿದೆ.



