ಶಿವಮೊಗ್ಗ:- ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
Advertisement
28 ವರ್ಷದ ರಂಜಿತಾ ಆತ್ಮಹತ್ಯೆಗೆ ಶರಣಾದ ಯುವತಿ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ನೇಣಿಗೆ ಶರಣಾಗಿದ್ದಾಳೆ.
ವೈಯಕ್ತಿಕ ವಿಚಾರವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರಂಜಿತಾ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.