ಅನಧಿಕೃತ ಆನ್‌ಲೈನ್ ಬೆಟ್ಟಿಂಗ್ ಆಪ್ 1xBET ಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭಾರತ ಕ್ರಿಕೆಟ್ ತಂಡದ ಮಾಜಿ ಓಪನರ್ ಶಿಖರ್ ಧವನ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಆ್ಯಪ್‌ಗಾಗಿ ಜಾಹೀರಾತು ಮಾಡಿದ್ದ ಕಾರಣಕ್ಕೆ ಧವನ್ ಅವರನ್ನು ವಿಚಾರಣೆಗಾಗಿ ಹಾಜರಾಗುವಂತೆ ಸೂಚಿಸಲಾಗಿದೆ.
ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಡಿ ತನಿಖೆ ನಡೆಸುತ್ತಿದೆ. ಬೆಟ್ಟಿಂಗ್ ಆ್ಯಪ್‌ಗಳು ಅನೇಕ ವ್ಯಕ್ತಿಗಳು ಮತ್ತು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಮತ್ತು ಭಾರಿ ಪ್ರಮಾಣದ ತೆರಿಗೆಯನ್ನು ತಪ್ಪಿಸಿದ ಆರೋಪವಿದೆ.
ನಿಷೇಧಿತ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ಹಲವಾರು ಟಾಲಿವುಡ್ ಮತ್ತು ಬಾಲಿವುಡ್ ಸೆಲೆಬ್ರಿಟಿಗಳು ಈಗಾಗಲೇ ಇಡಿ ಮುಂದೆ ಹಾಜರಾಗಿದ್ದಾರೆ. ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಕೂಡ ಕಳೆದ ತಿಂಗಳು ಇಡಿ ಮುಂದೆ ಹಾಜರಾಗಿದ್ದರು.



