ಬೆಂಗಳೂರು:- ನಗರದ ಸುದ್ದಗುಂಟೆಪಾಳ್ಯದ ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿಯ ಮೈ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಕೆ. ನರೇಶ್ ಪಟ್ಯಂ ಬಂಧಿತ ಆರೋಪಿ. ಘಟನೆ ನಂತರ ಸಿಸಿಟಿವಿ ಆಧರಿಸಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈತ ಬೈಕ್ ಟ್ಯಾಕ್ಸಿ ಹಾಗೂ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡು ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದ. ಆದರೆ ಕಳ್ಳತನ ಮಾಡುವುದು ಕೂಡ ಆತನ ಕಸುಬಾಗಿತ್ತು. ಹೀಗಾಗಿ ಕಳ್ಳತನ ಮಾಡಲು ಪಿಜಿಗೆ ನುಗ್ಗಿದ್ದ ವೇಳೆ ಯುವತಿಯ ದೇಹವನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತನಿಖೆ ವೇಳೆ ಗೊತ್ತಾಗಿದೆ.
ಈಗಾಗಲೇ ಆರೋಪಿ ವಿರುದ್ಧ ಮದನಪಲ್ಲಿಯಲ್ಲಿ ಕೂಡ ಎರಡು ಮೊಬೈಲ್ ಕಳ್ಳತನ ಪ್ರಕರಣಗಳಿವೆ. ಸದ್ಯ ಪಿಜಿಗೆ ನುಗ್ಗಿ ಕಳ್ಳತನ ಮಾಡಿ ಯುವತಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ನರೇಶ್ ನನ್ನು ಸಿಸಿಟಿವಿ ಆಧಾರದ ಮೇಲೆ ಸುದ್ದಗುಂಟೆ ಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



