ಬೀದರ್:- ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಜಿಜಾವು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮಾರಾಟಕ್ಕೆ ತಂದಿದ್ದ 5 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿರುವ ಘಟನೆ ಜರುಗಿದೆ.
Advertisement
ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಬೀದರ್ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ನೆರೆರಾಜ್ಯ ಮಹಾರಾಷ್ಟ್ರದಿಂದ ಗಾಂಜಾ ತಂದು ಬಸವಕಲ್ಯಾಣದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಖದೀಮರ ಜಾಲವನ್ನು ಬಯಲಿಗೆಳೆದಿದ್ದು, ಹೆಡೆಮುರಿ ಕಟ್ಟಿದ್ದಾರೆ.