ಬೆಂಗಳೂರು:– ಮತ ಪತ್ರದ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಷತ್ ಸದಸ್ಯ ರವಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಿಮ್ಮ ಸರ್ಕಾರವೇ ಇವಿಎಂ ಮೂಲಕ ಅಧಿಕಾರಕ್ಕೆ ಬಂದಿದೆ. ಇವಿಎಂನಲ್ಲಿ ಏನೂ ಅಕ್ರಮ ಸಾಧ್ಯವಿಲ್ಲ ಎಂದು ಅನೇಕ ಕೋರ್ಟ್ ತೀರ್ಪು ಬಂದಿದೆ. ರಾಜ್ಯ ಸರ್ಕಾರ ಮತ್ತೆ ಪುರಾತನ ಯುಗಕ್ಕೆ ಹೋಗುತ್ತಿದೆ. ರಾಹುಲ್ ಗಾಂಧಿ ಹೇಳಿದರು ಎಂದು ಮತ ಪತ್ರ ತೆಗೆದುಕೊಂಡು ಚುನಾವಣೆಗೆ ಹೋಗುತ್ತಿದ್ದಾರೆ. ನಾವು ಜನರ ಬಳಿ ಹೋಗುತ್ತಿದ್ದೇವೆ. ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂಬ ರೀತಿ ಸರ್ಕಾರ ಏನೇನೋ ತಪ್ಪು ಮಾಡಲು ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ವ್ಯವಸ್ಥಿತವಾಗಿ ದೇಸಾಯಿ ಆಯೋಗದ ವರದಿಯಲ್ಲಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಕೊಡಲು ಷಡ್ಯಂತ್ರ ಮಾಡಿದ್ದಾರೆ. ಸಿದ್ದರಾಮಯ್ಯ ತಪ್ಪು ಮಾಡಿರುವುದು ನೂರಕ್ಕೆ ನೂರು ಸತ್ಯ. ಕ್ಲೀನ್ ಚಿಟ್ ಕೊಡುವಲ್ಲಿ ಸಾಕಷ್ಟು ನೀರು ಹರಿಸಿದ್ದಾರೆ. ತಾವೇ ನೇಮಿಸಿದ ಸಮಿತಿಯಿಂದ ಕ್ಲೀನ್ ಚಿಟ್ ಪಡೆಯುವುದು ದೊಡ್ಡ ವಿಷಯವಲ್ಲ. ಅವರು ಎಲ್ಲಾ ಭ್ರಷ್ಟರಿಗೆ ಆಶ್ರಯ ಕೊಟ್ಟಿರುವಂತಹ ಸಿಎಂ ಎಂದು ಆರೋಪಿಸಿದ್ದಾರೆ.