ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇಲ್ಲಿಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಶಂಭುಲಿಂಗಪ್ಪ ಹನುಮಪ್ಪ ಶೆಟ್ಟಿನಾಯಕ ಅವರು ಗದಗ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
Advertisement
ಗದಗ ನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶೆಟ್ಟಿನಾಯಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರು, ಗ್ರಾಮಸ್ಥರು ಶೆಟ್ಟಿನಾಯಕರನ್ನು ಅಭಿನಂದಿಸಿದ್ದಾರೆ.