ಬೆಂಗಳೂರು:- ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಆಹ್ವಾನ ಮಾಡಿರುವ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Advertisement
ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದೆ. ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಆದರೂ ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡಿದ್ದಾರೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಮನವಿ ಮಾಡಿದ್ದಾರೆ. ಈ ವಿಚಾರ ಇನ್ನಷ್ಟೇ ಹೈಕೋರ್ಟ್ ಅಲ್ಲಿ ವಿಚಾರಣೆಗೆ ಬರಬೇಕಿದೆ.


