ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸೆ.10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜರುಗಲಿರುವ ಒಳಮೀಸಲಾತಿ ವಿರೋಧಿಸಿ ನಡೆಯಲಿರುವ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಶಿರಹಟ್ಟಿ ಮತಕ್ಷೇತ್ರವೂ ಸೇರಿದಂತೆ ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಲಿದ್ದಾರೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
Advertisement
ಅವರು ಶನಿವಾರ ಶಿರಹಟ್ಟಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರಕಾರ ನ್ಯಾ.ನಾಗಮೋಹನ ದಾಸ ಆಯೋಗದ ಮೂಲಕ ಮಾಡಿದ ಸಮೀಕ್ಷೆಯಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದ್ದು, ಬೃಹತ್ ಸಂಖ್ಯೆಯಲ್ಲಿ ಸೇರಿ ಹೋರಾಟ ಮಾಡಲಾಗುವುದು ಎಂದರು.
ಜಾನು ಲಮಾಣಿ, ಶಿವಣ್ಣ ನೆಲೋಗಲ್, ಗುರಪ್ಪ ಲಮಾಣಿ, ಈರಣ್ಣ ಚವ್ಹಾಣ, ಆನಂದ ನಾಯಕ, ಸೋಮರಡ್ಡಿ ಲಮಾಣಿ, ಪುಂಡಲೀಕ ಲಮಾಣಿ, ಕಿರಣ ಲಮಾಣಿ, ಶೇಖಪ್ಪ ಲಮಾಣಿ, ಮಲ್ಲೇಶ ಲಮಾಣಿ, ಧರ್ಮಣ್ಣ ದೇವಿಹಾಳ, ಕೃಷ್ಣಾ ಸೂರಣಗಿ, ಸೋಮು ಲಮಾಣಿ ಮುಂತಾದವರು ಉಪಸ್ಥಿತರಿದ್ದರು.


