ಮದ್ದೂರು ಕಲ್ಲೆಸೆತ ಪ್ರಕರಣ: ಹಿಂದೂಗಳ ಮೇಲೆ ಕೇಸ್ ದಾಖಲಾಗಿಲ್ಲ – ಸಚಿವ ಚಲುವರಾಯಸ್ವಾಮಿ!

0
Spread the love

ಬೆಂಗಳೂರು:- ಮದ್ದೂರು ಕಲ್ಲೆಸೆತ ಪ್ರಕರಣದಲ್ಲಿ ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ವಿಚಾರಣೆ ನಡೆಸಿ ನಂತರ 21 ಜನರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ. ಆದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಚೋದಿಸುತ್ತಿದ್ದಾರೆ. ಇನ್ನಷ್ಟು ಬಿಗಿಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡುವುದು ಸರಿಯಲ್ಲ ಎಂದರು.

ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿ ನಡೆದಿರಲಿಲ್ಲ. ಹೊರಗಡೆಯಿಂದ ಬಂದು ಯಾರೋ ಗಲಭೆ ಮಾಡಿರಬಹುದು ಎಂಬುದನ್ನೂ ವಿಚಾರಣೆ ಮಾಡುತ್ತಿದ್ದೇವೆ. ಯಾವುದೇ ಸಮಾಜವಿದ್ದರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಬಿಜೆಪಿ, ಜೆಡಿಎಸ್‌ನವರು ರಾಜಕೀಯವಾಗಿ ನಮ್ಮನ್ನು ಎದುರಿಸಲು ಆಗದೇ ಪ್ರಚೋದನೆ ಮಾಡುತ್ತಿದ್ದಾರೆ. ನಾವು ಯಾರ ಓಲೈಕೆಯನ್ನ ಕೂಡ ಮಾಡುತ್ತಿಲ್ಲ. ಹಾಗಿದ್ರೆ ಯಾಕೆ 21 ಜನರ ಬಂಧನ ಮಾಡುತ್ತಿದ್ದೆವು? ಇದು ಪೂರ್ವನಿಯೋಜಿತ, ನಮಗೆ ಎಲ್ಲ ಗೊತ್ತಿದೆ. ಈ ಹಿಂದೆ ಮಂಗಳೂರಿನಿಂದ ಪಾಂಡವಪುರಕ್ಕೆ ಬಂದು ಏನು ನಡೆಸಿದ್ರು ಗೊತ್ತಿದೆ ನಮಗೆ. ನಾಗಮಂಗಲದಲ್ಲೂ ನಡೆಸಿದ್ರು, ಈ ಸಲ ಎಚ್ಚರಿಕೆ ವಹಿಸಿದ್ದೇವೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here