ಮಂಗಳೂರು:- ಸೌಜನ್ಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ಮಾವ ವಿಠಲ ಗೌಡ ಎಂದು ಹೇಳುವ ಮೂಲಕ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ಈ ಕುರಿತು ದಕ್ಷಿಣ ಕನ್ನಡ ಎಸ್‌ಪಿ ಡಾ.ಅರುಣ್ ಕುಮಾರ್‌ಗೆ ದೂರು ಅರ್ಜಿ ಸಲ್ಲಿಸಿದ್ದಾರೆ. ಸೌಜನ್ಯಳ ಮೇಲೆ ಸೋದರಮಾವ ವಿಠಲ ಗೌಡಗೆ ಕೆಟ್ಟ ದೃಷ್ಟಿ ಇತ್ತು. ಆಕೆಯನ್ನು ಬಳಸಿಕೊಳ್ಳಲು ಬಹಳ ಸಮಯದಿಂದ ಹವಣಿಸುತ್ತಿದ್ದ. ಒಪ್ಪದೇ ಇದ್ದಂತ ಸಂದರ್ಭದಲ್ಲಿ ಆಕೆ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಎಂದು ಆರೋಪಿಸಿದ್ದಾರೆ.
ಸಾಂದರ್ಭಿಕ ಸಾಕ್ಷಿಗಳನ್ನು ಇಟ್ಟುಕೊಂಡು ದಕ್ಷಿಣ ಕನ್ನಡ ಎಸ್ಪಿ ತನಿಖೆ ನಡೆಸಬೇಕೆಂದು ಸ್ನೇಹಮಯಿ ಕೃಷ್ಣ ದೂರಿನ ಮೂಲಕ ಮಂಪರು ಪರೀಕ್ಷೆ ಮಾಡಲು ಆಗ್ರಹಿಸಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿಗೂ ಸಹೋದರ ವಿಠಲ ಗೌಡನ ಮೇಲೆ ಸಂಶಯವಿತ್ತು. ಸೌಜನ್ಯ ಮೃತದೇಹವನ್ನು ನೋಡಲು ಕುಸುಮಾವತಿ ಹೋಗಿರಲಿಲ್ಲ. ಸಂತೋಷ್ ರಾವ್ ಅವರನ್ನು ಈ ಕೃತ್ಯಕ್ಕೆ ಬಳಸಿಕೊಂಡಿರಬಹುದು. ಈ ಬಗ್ಗೆ ನಾನು ಬಹಳ ದಿನಗಳಿಂದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ್ದಾರೆ.



