ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತು ಇಂದು ಕೋರ್ಟ್ ಮಹತ್ವದ ತೀಪ್ರು ಪ್ರಕಟಿಸಲಿದೆ. ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಕುರಿತು ವಿಚಾರಣೆ ನಡೆದಿದ್ದು, ಇಂದು ದರ್ಶನ್ ಜೈಲು ವಾಸದ ನಿರ್ಣಾಯಕ ದಿನವಾಗಲಿದೆ.
ನ್ಯಾಯಧೀಶರದ ಮುಂದೆ ದರ್ಶನ್ ಪರ ಹಿರಿಯ ವಕೀಲ ಸಂದೇಶ್ ಚೌಟ ತಮ್ಮ ವಾದವನ್ನು ಈಗಾಗ್ಲೆ ಮಂಡಿಸಿದ್ದಾರೆ. ಅತ್ತ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಕೋರ್ಟ್‌ನಲ್ಲಿ ಪ್ರತಿವಾದ ಮುಗಿದಿದ್ದು, ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಇಂದು ಅಂತಿಮ ಆದೇಶ ಹೊರಡಿಸಲಿದ್ದಾರೆ.
ದರ್ಶನ್ ತಾಯಿಯ ಆರೋಗ್ಯ ಹದಗೆಟ್ಟಿದೆ. ಹೀಗಾಗಿ ಮಗನನ್ನು ನೋಡಲು ಬಳ್ಳಾರಿ ಜೈಲಿಗೆ ಹೋಗಲು ಕಷ್ಟವಾಗುತ್ತದೆ. ಆದ್ದರಿಂದ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡದಂತೆ ದರ್ಶನ್ ಪರ ವಕೀಲರು ವಾದ ಮಂಡಿಸಿದ್ದಾರೆ. ಇನ್ನೂ ದರ್ಶನ್ನನ್ನು ಬಳ್ಳಾರಿಗೆ ಜೈಲಿಗೆ ಶಿಫ್ಟ್ ಮಾಡುವಂತೆ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದಾರೆ.